ಸುದ್ದಿಬಿಂದು ಬ್ಯೂರೋ‌ ವರದಿ
ಹೊನ್ನಾವರ : ತಾಲೂಕಿನ ಕುದ್ರಿಗಿ ತೂಗು ಸೇತುವೆ ಮೇಲೆ ಕ್ಷುಲ್ಲಕ ಕಾರಣಕ್ಕೆ ನಡೆದ ಚಾಕು ಇರಿತ ಘಟನೆಯಲ್ಲಿ ಓರ್ವಯುವಕ ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.

ಗಾಯಗೊಂಡ ಯುವಕನನ್ನು ಕುದ್ರಿಗಿಯ ನಿವಾಸಿ ವಿವೇಕ್ ನಾಯ್ಕ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅದ್ನಾನ್ ಸಂಶಿ ಎಂಬ ಯುವಕನು ಚಾಕು ಇರಿತ ನಡೆಸಿದ್ದು, ವಿವೇಕ್ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ.

ಘಟನೆ ನಡೆದ ತಕ್ಷಣ ಸಾರ್ವಜನಿಕರು ಹಾಗೂ ಹೊನ್ನಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.ಗಂಭೀರ ಗಾಯಗೊಂಡ ವಿವೇಕ್ ನಾಯ್ಕನನ್ನು ಹೊನ್ನಾವರ ತಾಲೂಕಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Mirjana/ಮಿರ್ಜಾನದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಪ್ರಕರಣ : ಅರ್ಜಿ ವಜಾ