ಸುದ್ದಿಬಿಂದು ಬ್ಯೂರೋ ವರದಿ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಶರಾವತಿ ಪಂಪ್ಡ್ ಸ್ಟೋರೆಜ್ ಯೋಜನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆಯ ವತಿಯಿಂದ ಸಾರ್ವಜನಿಕ ಅಹವಾಲು ಸಭೆ ಆರಂಭವಾಗಿದೆ.

ಸಭೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಹರಿದುಬಂದಿದ್ದು, ಎರಡು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಮೂಲಕ ಸಭಾಂಗಣ ಜನಸಾಗರದಿಂದ ಕಿಕ್ಕಿರಿದು ಹೋಗಿದೆ. ಗೇರುಸೊಪ್ಪ ಗುತ್ತಿ ಕನ್ನಿಕಾ ದೇವಸ್ಥಾನದ ಸಭಾಂಗಣದಲ್ಲಿ ಈ ಸಭೆ ನಡೆದಿದ್ದು, ಅತೀ ಸಣ್ಣ ಜಾಗದಲ್ಲಿ ಕಾರ್ಯಕ್ರಮ ಆಯೋಜಿಸಿರುವುದಕ್ಕೆ ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಯಿಂದ ರೂಪಿತವಾಗಿರುವ ಈ ಯೋಜನೆಯಡಿ 2000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಉದ್ದೇಶ ಹೊಂದಲಾಗಿದೆ. ಶರಾವತಿ ನದಿಯಲ್ಲಿ ಜಾರಿಗೆ ಬರಲಿರುವ ಈ ಯೋಜನೆಗಾಗಿ ಸುಮಾರು 16 ಸಾವಿರಕ್ಕೂ ಅಧಿಕ ಮರಗಳನ್ನು ಕಡಿದು ಹಾಕಬೇಕಾಗಿರುವುದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಪಶ್ಚಿಮಘಟ್ಟ ಪ್ರದೇಶದಲ್ಲಿ ಇಂತಹ ಯೋಜನೆ ಬೇಡವೆಂದು ಸಭೆಯಲ್ಲಿ ಸಾರ್ವಜನಿಕರು ಗಟ್ಟಿಯಾಗಿ ವಿರೋಧ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ, ಎಸ್ಪಿ ದೀಪನ್, ಶಾಸಕ ದಿನಕರ ಶೆಟ್ಟಿ, ಬಂಗಾರಮಕ್ಕಿ ಮಹಾಸಂಸ್ಥಾನದ ಮಾರುತಿ ಗುರೂಜಿ ಹಾಗೂ ಮಾಜಿ ಶಾಸಕ ಸುನೀಲ್ ನಾಯ್ಕ ಸೇರಿ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಲಾರಿ-ಬಸ್ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು, ಹಲವರಿಗೆ ಗಾಯ