ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ:ತಾಲೂಕಿನ ಗೌಡಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಕೆಎಸ್ಆರ್ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯ ನಂತರ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಮರಕ್ಕೆ ಹೊಡೆದಿದ್ದು, ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಈ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಇದನ್ನೂ ಓದಿ: ಸಿಲೆಂಡರ್ ಸ್ಪೋಟದಿಂದ ಸಾವನ್ನಪ್ಪಿದ ವಿದ್ಯಾರ್ಥಿನಿಯ ಕುಟುಂಬಕ್ಕೆ ಶಾಸಕ ಭೀಮಣ್ಣ ನಾಯ್ಕ ಸಾಂತ್ವನ