ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ರಾಜ್ಯದ ಪ್ರಮುಖ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕ್‌ಗಳಲ್ಲೊಂದಾದ ಕೆಡಿಸಿಸಿ ಬ್ಯಾಂಕ್ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂದು ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ತಿಳಿಸಿದ್ದಾರೆ.
ಅಕ್ಟೋಬರ್ 13ರಿಂದ 17ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 19ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 21ಕ್ಕೆ ಚಿಹ್ನೆ ಹಂಚಿಕೆ ಮಾಡಲಾಗುವುದು..
ಅಗತ್ಯವಿದ್ದರೆ ಅಕ್ಟೋಬರ್ 25ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಮತ ಎಣಿಕೆ ನಡೆಸಿ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೆಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಭಟ್ಟ, ಸಹಕಾರಿ ಅಧಿಕಾರಿ ಅಜಿತ್ ಶಿರಹಟ್ಟಿ ಹಾಗೂ ಕಂದಾಯ ಅಧಿಕಾರಿ ಡಿ.ಆರ್. ಬೆಳ್ಳಿಮನೆ ಉಪಸ್ಥಿತರಿದ್ದರು.
ಇದನ್ನೂ ಓದಿ: YouTuber Mukaleppa/ ಮುಕಳೆಪ್ಪನ ಬೆಂಬಲಕ್ಕೆ ಅಹಿಂದ ಸಂಘಟನೆ : ಭದ್ರತೆ ಒದಗಿಸುವಂತೆ ಆಗ್ರಹ