ಸುದ್ದಿಬಿಂದು ಬ್ಯೂರೋ ವರದಿ (Suddibindu Digital News)
ಹುಬ್ಬಳ್ಳಿ: ನಗರದ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಮಹಿಳೆಯರ ಒಳ ಉಡುಪುಗಳ ಕಳ್ಳತನ ನಡೆಸಿರುವ ಕಾಮುಕ‌ನ ಕೃತ್ಯ ಬೆಳಕಿಗೆ ಬಂದಿದೆ.

ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಸೈಕೋಪಾತ್ ಯುವಕನ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆ ಸಿಕ್ಕಿದೆ. ರಾತ್ರಿ ವೇಳೆ ಯಾರಿಗೂ ತಿಳಿಯದಂತೆ ಬಂದು ಬಟ್ಟೆಗಳನ್ನು ಕದ್ದು ಪರಾರಿಯಾಗುತ್ತಿದ್ದಾನೆ.

ಸಾಮಾನ್ಯ ಬಟ್ಟೆಗಳನ್ನು ಬಿಟ್ಟು ಕೇವಲ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವುದರಿಂದ ಸ್ಥಳೀಯ ಮಹಿಳೆಯರಲ್ಲಿ ಆತಂಕ ಮನೆಮಾಡಿದೆ. ಈ ಅಸಹಜ ಘಟನೆ ಜನರ ನಿದ್ದೆಗೆಡಿಸುವಂತಾಗಿದೆ. ಘಟನೆಯ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡುತ್ತಿದ್ದು, ಸೈಕೋಪಾತ್ ಯುವಕನನ್ನು ತಕ್ಷಣವೇ ಬಂಧಿಸಬೇಕೆಂದು ಸ್ಥಳೀಯರು ಪೊಲೀಸ್ ಇಲಾಖೆಗೆ ಆಗ್ರಹ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಆರಂಭಿಸಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.