ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ :ಕಳೆದ ನಾಲ್ಕೈದು ದಿನಗಳ ಹಿಂದೆ ಬರ್ಗಿ ಗಜನಿ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವನ ಶವ ಅನುಮಾನಾಸ್ಪ ರೀತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದ್ದು,ಕೊಲೆ‌ ಶಂಕೆ ವ್ಯಕ್ತವಾಗುತ್ತಿದ್ದು, ಈ ಪ್ರಕರಣ ತಡವಾಗಿ ಬೆಳಕಿಗೆ ಬರುತ್ತಿದೆ.

ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವ್ಯಕ್ತಿ ಕಿಮಾನಿ ಭಾಗದ ವ್ಯಕ್ತಿ ಎಂದು ಹೇಳಲಾಗುತ್ತಿದೆ.‌ ಈತ ಗಜನಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಬರ್ಬರವಾಗಿ ಹಲ್ಲೆ ಮಾಡಲಾಗಿತ್ತು ಎನ್ನಲಾಗಿದ್ದು. ಹಲ್ಲೆ ಮಾಡಿದ ಬಳಿಕ ಆತನನ್ನ ಗಜನಿ ಪ್ರದೇಶದಿಂದ‌ ರಾತ್ರೋ ರಾತ್ರಿ ಎಳೆದು ತಂದು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ ಎನ್ನುವ‌ ಮಾತುಗಳು ಕೇಳಿ ಬರುತ್ತಿದ್ದು,‌ ಪೊಲೀಸರಿಗೂ ಮಾಹಿತಿ ನೀಡದಂತೆ ಪ್ರಕರಣ‌‌‌ ಮುಚ್ಚಿಹಾಕಲಾಗಿದೆ ಎನ್ನುವ ಬಗ್ಗೆ  ಹಾದಿ ಬೀದಿಯಲ್ಲಿ ಚರ್ಚೆಯಾಗುತ್ತಿದೆ‌ ಎನ್ನಲಾಗಿದೆ.

ಸಾವನ್ನಪ್ಪಿದ್ದ ವ್ಯಕ್ತಿ ಗಜನಿಯಲ್ಲಿ ಮೀನು ಕಳ್ಳತ‌ಮಾಡಿದ್ದದ್ದರೆ ಆತನ ಹಿಡಿದು ಪೊಲೀಸರಿಗೆ ಒಪ್ಪಿಸಬಹುದಾಗಿತ್ತು ಆದರೆ. ಕಾನೂನು ಕೈಗೆ ತೆಗೆದುಕೊಂಡು ಕೊಲೆ ಮಾಡುವ ಹಂತಕ್ಕೆ ಹೋಗಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇತಂಹ ಹಂತಕರ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸದೆ ಇದಲ್ಲಿ ಮುಂದಿನ ದಿನದಲ್ಲಿ ಈ ಭಾಗದಲ್ಲಿ ಇನ್ನೂ ಘನಘೋರ ಘಟನೆ ನಡೆಯುವ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಪ್ರಕರಣ ದಾಖಲಿಸದಂತೆ ಕುಟುಂಬಸ್ಥರಿಗೆ ಬೆದರಿಕೆ ಹಾಕಲಾಗಿದೆ ಎನ್ನುವ ಚರ್ಚೆ ಸಹ ನಡೆಯುತ್ತಿದೆ..ಈ ಬಗ್ಗೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ತನಿಖಾ‌ ತಂಡವನ್ನ ರಚಿಸಿ ಅನುಮಾನಾಸ್ಪದ ಸಾವಿನ ತನಿಖೆ ನಡೆಸಿ ಸತ್ಯ ಬಯಲಿಗೆಳಯಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಗೋಕರ್ಣ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ ಎನ್ನಲಾಗಿದೆ.

ಸುದ್ದಿ ಮುಂದುವರೆಯುವುದು……

ಇದನ್ನೂ ಓದಿ/ Accident/ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್-ಕಾರು ಡಿಕ್ಕಿ : ಬೈಕ್ ಸಾವಾರ ಗಂಭೀರ