ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ತಾಲೂಕಿನ ಮಿರ್ಜಾನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರ ದರ್ಗಾ ಬಳಿ ಇರುವ ಗೂಡಂಗಡಿಯ ಹಿಂಬದಿಯಲ್ಲಿ ವ್ಯಕ್ತಿ ಓರ್ವ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಗುರುವಾರ ನಡೆದಿದೆ.
ಆತ್ಮ ಹತ್ಯೆ ಮಾಡಿಕೊಂಡು ವ್ಯಕ್ತಿ ವಿನಾಯಕ ನಾಯ್ಕ ಎಂದು ಗುರುತಿಸಲಾಗಿದೆ. ಈತ ಮೂಲತಃ ಹೊನ್ನಾವರ ತಾಲೂಕಿನ ಮಂಕಿ ನಿವಾಸಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಡಿತದ ಚಟಕ್ಕೆ ಒಳಾಗಿದ್ದ ಎನ್ನಲಾಗಿದೆ. ಈತ ಮಿರ್ಜಾನ ಮ ಗ್ರಾಮದ ಯುವತಿಯನ್ನ ವಿವಾಹವಾಗಿ ಅಲ್ಲಿಯೇ ವಾಸವಾಗಿದ್ದು, ಈತನಿಗೆ ಇಬ್ಬರೂ ಹೆಣ್ಣು ಮಕ್ಕಳು ಇದ್ದಾರೆ.
ಈತ ಕಳೆದ ಹದಿನೈದು ದಿನದಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಕುಟುಂಬದವರು ಆತನ ಸಂಪರ್ಕಿಸಲು ಪ್ರಯತ್ನಿಸಿದರು ಸಾಧ್ಯವಾಗಿರಲಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನ ಕುಮಟಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆ : ನಾಮ ಪತ್ರ ಸಲ್ಲಿಸಿದ ಸರಸ್ವತಿ ಎನ್. ರವಿ