ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :ತಾಲೂಕಿನ ಮಾಜಾಳಿಯ ಯುವ ಮೀನುಗಾರ ಅಕ್ಷಯ ಮಾಜಾಳೀಕರ ಮೃತಪಟ್ಟಿರುವುದು ದುರ್ದೈವ ಸಂಗತಿಯಾಗಿದೆ ಎಂದು ಸಂತಾಪ ಸೂಚಿಸಿರುವ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರು, ಮೃತನ ಕುಟುಂಬಕ್ಕೆ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಮೀನಿನ ಮುಳ್ಳು ಚುಚ್ಚಿ ಪ್ರಾಣವನ್ನೇ ಕಳೆದುಕೊಳ್ಳುವ ದುರಂತ ಉಂಟಾಗಿರುವುದು ಆಘಾತಕಾರಿ ಘಟನೆಯಾಗಿದೆ. ಅಗಲಿದ ಯುವಕನ ಆತ್ಮಕ್ಕೆ ಸದ್ಗತಿ ದೊರೆಯಲಿ, ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ರೂಪಾಲಿ ಎಸ್.ನಾಯ್ಕ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಇದನ್ನೂ ಓದಿ/RSS/ಆರ್‌ಎಸ್‌ಎಸ್ ಪ್ರಾಯೋಜಿತ ದುಷ್ಕರ್ಮಿಗಳ ಬೆದರಿಕೆ ಪದಗಳನ್ನ ಖಂಡಿಸುತ್ತೇವೆ:ನಿವೇದಿತ್ ಆಳ್ವಾ