ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ :ಕಾರವಾರ ಹಾಗೂ ಗೋವಾ ನಡುವೆ ಸಂಪರ್ಕದ ಕೊಂಡಿಯಾಗಿರುವ ಕಾಳಿ ನದಿಗೆ ಸೇತುವೆ ನಿರ್ಮಾಣಕ್ಕೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅನೌಪಚಾರಿಕವಾಗಿ ಶಿಲಾನ್ಯಾಸ ನೆರವೇರಿಸಿದ್ದು, ನೂತನ ಸೇತುವೆಯನ್ನು ಅತಿ ಶೀಘ್ರದಲ್ಲಿ ಮಂಜೂರಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.

ಸಂಪೂರ್ಣ ಕೇಂದ್ರ ಸರ್ಕಾರದ ಅನುದಾನದಲ್ಲಿ 150 ಕೋಟಿ ವೆಚ್ಚದಲ್ಲಿ 3ವರ್ಷಗಳಲ್ಲಿ ಈ ಸೇತುವೆ ನಿರ್ಮಾಣವಾಗಲಿದೆ. ಹಾಗೆಯೆ ಕುಸಿದು ಬಿದ್ದ ಸೇತುವೆಯ ಅವಶೇಷಗಳನ್ನು ಶೀಘ್ರವಾಗಿ ತೆಗೆಯಲಾಗಿದೆ.ನೀರಿನ ಅಡಿಯಲ್ಲಿ ಕಬ್ಬಿಣದ ರಾಡ್ ಗಳು ಅಥವಾ ಯಾವುದೆ ಅವಶೇಷಗಳು ಇದ್ದಲ್ಲಿ ಅದನ್ನು ಸಂಪೂರ್ಣವಾಗಿ ತೆರವುಗೊಳಿಸುವ ಅವಶ್ಯಕತೆ ಇದೆ. ಗುಣಮಟ್ಟದ ಸೇತುವೆ ನಿರ್ಮಾಣವಾಗಿ ನಿಗದಿತ ಅವಧಿಯಲ್ಲಿ ಸಂಚಾರಕ್ಕೆ ಸೇತುವೆ ಮುಕ್ತವಾಗಲಿದೆ ಎಂದು ಆಶಿಸುತ್ತೇನೆ.

ಸೇತುವೆ ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಸೇತುವೆ ನಿರ್ಮಾಣಕ್ಕೆ ಪ್ರಯತ್ನಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.

ಇದನ್ನೂ ಓದಿ/ಮೀನು ಹಿಡಿಯಲು ಹೋದ ಯುವಕನಿಗೆ ಮೀನು ಚುಚ್ಚಿ ಸಾವು