ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ: ಬೆಂಗಳೂರಿನಿಂದ ರಾಮನಗರ ಮೂಲಕ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೋಯಿಡಾದ ಜಲ್ಕಟ್ಟಿ ಬಳಿ ನಡೆದಿದೆ.
ಬೆಂಗಳೂರಿನಿಂದ ಪ್ರವಾಸೋದ್ಯಮಕ್ಕಾಗಿ ಗೋವಾಕ್ಕೆ ಕುಟುಂಬವೊಂದನ್ನ ಕರೆದೊಯ್ಯುತ್ತಿದ್ದ ವಾಹನವೊಂದು ಪಲ್ಟಿಯಾಗಿದೆ. ವಾಹನದಲ್ಲಿ ಒಟ್ಟು ಏಳು ಪ್ರಯಾಣಿಕರು ಇದ್ದರು, ಉಳಿದ ಆರು ಮಂದಿ ಪ್ರಯಾಣಿಕರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ವಾಹನ ಚಾಲಕ ಪ್ರಜ್ವಲ್ ಬೆಂಗಳೂರು ಇವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಅವರನ್ನ ತಕ್ಷಣ ರಾಮನಗರ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸುದ್ದಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.