ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ: ಸ್ನೇಹಿತರೊಂದಿಗೆ ಪಾಂಡ್ರಿ ನದಿಯಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಂದೇವಾಡಿ ಬಳಿ ನಡೆದಿದೆ.
ಮೃತ ವ್ಯಕ್ತಿ ದಾಂಡೇಲಿಯ ಗಣೇಶನಗರದ ನಿವಾಸಿ ಇರ್ಷಾದ್ ಅಹ್ಮದ್ (37)ಎಂದು ಗುರುತಿಸಲಾಗಿದೆ. ಸ್ನಾನಕ್ಕಾಗಿ ನದಿಗೆ ಇಳಿದ ವೇಳೆ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ/ಪತಿಯನ್ನ 5 ಲಕ್ಷಕ್ಕೆ ಮಾರಾಟ ಮಾಡಿದ ಪತ್ನಿ!