School Holiday: /ಬೆಂಗಳೂರು: ಈಶಾನ್ಯ ಮುಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಭಾರತದ ಅನೇಕ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಮಳೆ ಚುರುಕುಗೊಂಡಿದ್ದು, ಉತ್ತರಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚೆನ್ನೈ ಜಿಲ್ಲಾಧಿಕಾರಿ ರಶ್ಮಿಕಾ ಸಿದ್ಧಾರ್ಥ್ ಜಗಡೆ ಅವರು ಮಳೆ ತೀವ್ರತೆಯ ಹಿನ್ನೆಲೆಯಲ್ಲಿ ಚೆನ್ನೈ ನಗರದಲ್ಲಿನ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿರುವುದಾಗಿ ತಿಳಿಸಿದ್ದಾರೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ದೇಶದಾದ್ಯಂತ ಅಕ್ಟೋಬರ್ 29ರವರೆಗೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈಶಾನ್ಯ ಮುಂಗಾರು ಬಲ ಪಡೆದುಕೊಂಡಿದ್ದು, ಕರಾವಳಿ ಪ್ರದೇಶಗಳಲ್ಲಿ ಗಾಳಿ ವೇಗ ಹೆಚ್ಚಾಗಿದೆ.

ಮರೀನಾ ಬೀಚ್‌ ಸೇರಿದಂತೆ ಚೆನ್ನೈ ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳು ಉಗ್ರಗೊಂಡಿದ್ದು, ಮೀನುಗಾರರಿಗೆ ಮುಂದಿನ ಎರಡು ದಿನಗಳವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಬಾರಿ ಮುಂಗಾರು ಮಳೆ ಉತ್ತಮ ಪ್ರಮಾಣದಲ್ಲಿ ಆಗಿರುವ ಹಿನ್ನೆಲೆಯಲ್ಲಿ ಹಿಂಗಾರು ಮಳೆಯು ಸಹ ಉತ್ತಮವಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ/ಸಚಿವ ಮಂಕಾಳ್ ವೈದ್ಯರ ವಿರುದ್ಧ ಸುಳ್ಳು ವಿಡಿಯೋ ಪೋಸ್ಟ್ ಮಾಡಿದ ಪುರಂದರ ನಾಯ್ಕ ಬಂಧನ