ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಚಾಲಕನ ನಿಯಂತ್ರಣ ತಪ್ಪಿದ ಇರುಳ್ಳಿ ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ‌ ಹಿರೇಗುತ್ತಿಯ ಪೊಲೀಸ್ ಚೆಕ್ ಪೊಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಬುಧವಾರ ತಡರಾತ್ರಿ ನಡೆದಿದೆ.

 ಪುಣೆಯಿಂದ ಇರುಳ್ಳಿ ತುಂಬಿಕೊಂಡು ಮಂಗಳೂರು ಕಡೆ ಚಲಿಸುತ್ತಿದ್ದ ವೇಳೆ ಹಿರೇಗುತ್ತಿಯ ಪೊಲೀಸ್ ಚೆಕ್ ಪೊಸ್ಟ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಟ್ಟಿಯಾಗಿದೆ. ಇದರಿಂದಾಗಿ ಹೆದ್ದಾರಿ ಪಕ್ಕದಲ್ಲಿದ್ದ‌ ತಾತ್ಕಾಲಿಕ ಚೆಕ್ ಪೊಸ್ಟ್ ಸಂಪೂರ್ಣವಾಗಿ ನುಜ್ಜುಗುಜ್ಜಗಿದೆ.

ಅದೃಷ್ಟವಶಾತ್ ಕರ್ತವ್ಯದಲ್ಲಿ ಇದ್ದ ಪೊಲೀಸ್ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐಆರ್‌ಬಿ ಕಂಪನಿಯ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ/ಹೊಂಡೆ ಉತ್ಸವದಲ್ಲಿ ಬಿಜೆಪಿ ರಾಜ್ಯ ಉಪಾದ್ಯಕ್ಷೆ ರೂಪಾಲಿ ನಾಯ್ಕ್ ಕುಟುಂಬಸ್ಥರೊಂದಿಗೆ ಬಾಗಿ