ಸುದ್ದಿಬಿಂದು ಬ್ಯೂರೋ ವರದಿ (suddibindu digital news)
ಮಂಗಳೂರು; ಮಂಗಳೂರು ಗಡಿಭಾಗದ ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರಂನಲ್ಲಿ ಭಾರೀ ಅವಘಡ ಸಂಭವಿಸಿದೆ. ಸ್ಥಳೀಯ ಡೆಕೋರ್ ಪ್ಯಾನಲ್ ಇಂಡಸ್ಟ್ರೀಸ್ ಪ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಬಹುತೇಕ ಭಾಗ ಛಿದ್ರ ಛಿದ್ರವಾಗಿದೆ. ಘಟನೆಯ ಸಮಯದಲ್ಲಿ ಕಾರ್ಖಾನೆಯೊಳಗೆ ಹಲವಾರು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರಿಂದ ಗಾಯಾಳುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.ಗಾಯಾಳುಗಳನ್ನು ಮಂಗಳೂರು ಮತ್ತು ಕಾಸರಗೋಡು ಸೇರಿದ ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.ಸ್ಥಳಕ್ಕೆ ಅಗ್ನಿಶಾಮ ಸಿಬ್ಬಂದಿಗಳು ಆಗಮಿಸಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಬಾಯ್ಲರ್ ಸ್ಫೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ/ಕರ್ನಾಟಕದಲ್ಲಿ ಬಿಜೆಪಿ ಹೊಸ ರಾಜಕೀಯ ಸಮೀಕರಣ: ಕುಮಾರಸ್ವಾಮಿ ಸುಪ್ರಿಂ


