ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಗೋವಾದಿಂದ ಬೆಂಗಳೂರಿನ ಹೊಸೂರಿಗೆ  ಕೋಟಿ ಕೋಟಿ ಹಣ ಸಾಗಾಟ ಮಾಡಲಾಗುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಒಂದು ಕೋಟಿ ಹಣವನ್ನ ವಶಕ್ಕೆ ಪಡೆದುಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮಾಜಾಳಿ ಚೆಕ್‌‌ಪೊಸ್ಟ್ ಬಳಿ ತಡ ರಾತ್ರಿ ನಡೆದಿದೆ.  .

ಕಲ್ಪೇಶ್‌ಕುಮಾರ ಹಾಗೂ ಇನ್ನೋರ್ವ ವ್ಯಕ್ತಿ ಸೇರಿ  ಖಾಸಗಿ ಬಸ್‌ನಲ್ಲಿ  ಒಂದು ಕೋಟಿ ಹಣವನ್ನ ಸಾಗಿಸುತ್ತಿದ್ದರು‌, ಈ ವೇಳೆ ಮಾಜಾಳಿ ಚೆಕ್‌ಪೊಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಕರ್ತವ್ಯದಲ್ಲಿ ಇದ್ದ ಪೊಲೀಸರು ಪ್ರಯಾಣಿಕರ ಬ್ಯಾಗ್ ತಪಾಸಣೆ ಮಾಡಿದ್ದು, ಈ ವೇಳೆ ಕಲ್ಪೇಶ ಬಳಿ ಇದ್ದ ಬ್ಯಾಗ್‌ನಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಪೊಲೀಸರು ವಶಕ್ಕೆ ಪಡೆದುಕೊಂಡ ಹಣ ಯಾರಿಗೆ ಸೇರಿದ್ದು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ, ಹಣದ  ಪತ್ತೆಗೆ ಮುಂದಾಗಲಾಗಿದೆ. ಅಕ್ರಮ ವ್ಯವಹಾರ ಅಥವಾ ರಾಜಕೀಯ ನಂಟುಗಳಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ/ಕಾಸರಗೋಡು ಬಳಿ ಪ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಓರ್ವ ಕಾರ್ಮಿಕ ಸಾವು, ಹಲವರಿಗೆ ಗಾಯ