ಅಂಕೋಲಾ : ತಾಲೂಕಿನ ಪೂಜಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.
ಆರೋಪಕ್ಕೊಳಗಾಗಿರುವ ಉಪನ್ಯಾಸಕ ರಾಮಚಂದ್ರ ಅಂಕೋಲೆಕರ್ ಎನ್ನಲಾಗಿದ್ದು, ಅವರು ವಿದ್ಯಾರ್ಥಿನಿಗಳ ಜೊತೆ ಪದೇಪದೇ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರು ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದು,ಇದರಿಂದ ಆಕ್ರೋಶಗೊಂಡ ಪೋಷರು ಘಟನೆಗೆ ಇಳಿದಿದ್ದಾರೆ. ಇದುವರೆಗೂ ಕ್ರಮ ಕೈಗೊಳ್ಳದೆ ಮೌನವಾಗಿರುವ ಬಗ್ಗೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು. ಕಾಲೇಜು ಗೇಟ್ ಎದುರು ನೂರಾರು ಮಂದಿ ಪೋಷಕರು ಹಾಗೂ ವಿದ್ಯಾರ್ಥಿಗಳು ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ..
ಆಡಳಿತ ಮಂಡಳಿಯ ಸದಸ್ಯರು ಸ್ಥಳಕ್ಕೆ ಬರುವಂತೆ ಪೋಷಜರು ಒತ್ತಾಯಿಸಿದ್ದು, ಆರೋಪಿಗೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಲೈಂಗಿಕ ಕಿರುಕುಳದ ಗಂಭೀರ ಆರೋಪ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದ್ದಾರೆ.


