ಸುದ್ದಿಬಿಂದು ಬ್ಯೂರೋ ವರದಿ /ಹೊನ್ನಾವರ: ಪಟ್ಟಣದ ರಾಮತೀರ್ಥ ಕ್ರಾಸ್ ಬಳಿ ನಡೆದ ಸರಣಿ ಬೈಕ್ ಅಪಘಾತದಲ್ಲಿ ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಬೀದರ ಜಿಲ್ಲೆಯ ಸುನೀಲ್‌ಕುಮಾರ್ ಸಂತೋಷ ಗಾಯಕವಾಡ ಮೃತ ವ್ತಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಕುಮಟಾದಲ್ಲಿರುವ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಮೂರು ಬೈಕ್ ನಡುವೆ ಈ ಅಪಘಾತ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ಇನ್ನಷ್ಟು ಮಹತ್ವದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ


