ಸುದ್ದಿಬಿಂದು ಬ್ಯೂರೋ ವರದಿ
ಬೆಳಗಾವಿ : ಪಟ್ಟದ ಆಟಕ್ಕೆ ಬ್ರೇಕ್ ಬಿತ್ತು ಎನ್ನುತ್ತಿರುವಾಗಲೇ ಮತ್ತೊಮ್ಮೆ ಈಗ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬರುವಂತಾಗಿದೆ. ಚಳಿಗಾಲ ಅಧಿವೇಶನ ಆರಂಭದಲ್ಲೇ ಈಗ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ.

ಸಿಎಂ ಬದಲಾವಣೆ ವಿಚಾರವಾಗಿ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದ ವೇಳೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನನ್ನ ತಂದೆ ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಾವಧಿ ಸಿಎಂ ಆಗಿ ಕಾರ್ಯನಿರ್ವಹಿಸಲಿದ್ದಾರೆ” ಅಂತಾ ಹೇಳಿಕೆ ನೀಡಿದ್ದಾರೆ.

ಇದೆ ವಿಚಾರವಾಗಿ ಮಾತನಾಡಿದ ಇಕ್ಬಾಲ್ ಹುಸೇನ್ “ನೋಡ್ತಾ ಇರೀ, ಜನವರಿ ಹತ್ತರೊಳಗೆ ಡಿಕೆ ಶಿವಕುಮಾರ ಸಿಎಂ ಆಗೋದನ್ನ ತಪ್ಪಿಸೋದು ಸಾಧ್ಯ ಇಲ್ಲ” ಎಂಬ ಹೇಳಿಕೆಯನ್ನು ನೀಡಿದ್ದಾರೆ. ಇದರ ನಡುವೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ “ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳತ್ತೋ ಅದಕ್ಕೆ ನಾವು ಬದ್ದರಾಗಿದ್ದೇವೆ. ಮೊದಲು ಹೇಳಿದ್ದು ಅದೇ, ಈಗಲೂ ಹೇಳೋದು ಅದೇ” ಎಂಬ ಹೇಳಿಕೆ ನೀಡುವ ಮೂಲಕ ಚೆಂಡು ಹೈಕಮಾಂಡ್ ಅಂಗಳಕ್ಕೆ ಎಸೆದಿದ್ದಾರೆ.

ಇದನ್ನೂ ಓದಿ/ಜಿಂಕೆ ಚರ್ಮ, ಕಾಡುಹಂದಿ ಮಾಂಸ ಸಾಗಿಸುತ್ತಿದ್ದ ಐವರ ಬಂಧನ