ಗೋಕರ್ಣ:ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ತಾಲೂಕಿನ ಹೊಸಕೇರಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗ್ರಾಮದ ಶಂಕರ ಈರಯ್ಯ ಆಚಾರ್ಯ ಅವರಿಗೆ ಸೇರಿದ ಕಟ್ಟಿಗೆ ಮಿಲ್ಲಿನಲ್ಲಿ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಕಟ್ಟಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕೂಡಲೇ ಎರಡು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ. ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ದೀರ್ಘ ಪರಿಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಅಗ್ನಿ ಅವಘಡದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡದ ಕಾರಣಗಳ ಬಗ್ಗೆ ತನಿಖೆ ಮುಂದುವರಿದಿದೆ. ಬೆಂಕಿಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ/ಹೊನ್ನಾವರದ ಖಾಸಗಿ ಬಸ್ ಚಾಲಕನ ರಾಸಲೀಲೆ : ಇನ್‌ಸ್ಟಾದಲ್ಲಿ ಪೊಟೋ ಅಪ್ಲೋಡ್..!