ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ತಡರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿ, ನಿಲ್ಲಿಸಿಟ್ಟಿದ್ದ ಎರಡು ಕಾರುಗಳು ಹಾಗೂ ಒಂದು ಆಟೋ ರಿಕ್ಷಾ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಘಟನೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ವಾಹನಗಳು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದ್ದು, ಕಾರುಗಳು ಹಾಗೂ ರಿಕ್ಷಾ ಸಂಪೂರ್ಣ ನಾಶವಾಗಿವೆ. ಈ ಅವಘಡದಿಂದ ವಾಹನ ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಸುಫ್ರೀನ್ ಫರ್ನಾಂಡಿಸ್ ಹಾಗೂ ಥಾಮಸ್ ಫರ್ನಾಂಡಿಸ್ ಅವರಿಗೆ ಸೇರಿದ ವಾಹನಗಳು ಬೆಂಕಿಗಾಹುತಿಯಾಗಿವೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಕುರಿತು ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




