ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇನ್ನೊಂದು ತಿಂಗಳೊಳಗೆ ಕ್ಯಾನ್ಸರ್ ಆಸ್ಪತ್ರೆ ಆರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರವಾರದ ಕ್ರಿಮ್ಸ್ (KIMS) ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೇವೆಗಳು ಶೀಘ್ರದಲ್ಲೇ ಆರಂಭವಾಗಲಿವೆ ಎಂದು ಹೇಳಿದರು.ಕಾರವಾರ ಕ್ರೀಮ್ಸ್ ಆಸ್ಪತ್ರೆಗೆ ಇನ್ನೂ ಹೆಚ್ಚಿನ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ತಜ್ಞ ವೈದ್ಯರು, ಅಗತ್ಯ ವೈದ್ಯಕೀಯ ಉಪಕರಣಗಳು ಹಾಗೂ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವರು ತಿಳಿಸಿದರು.

ಇದರಿಂದ ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶದ ಕ್ಯಾನ್ಸರ್ ರೋಗಿಗಳಿಗೆ ಸ್ಥಳದಲ್ಲೇ ಚಿಕಿತ್ಸೆ ಲಭ್ಯವಾಗಲಿದೆ ಎಂದರು. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ಕ್ಯಾನ್ಸರ್ ಆಸ್ಪತ್ರೆಗಳನ್ನು ತೆರೆಯುವ ಉದ್ದೇಶವಿದ್ದು, ಸಾರ್ವಜನಿಕರಿಗೆ ಸುಲಭ ಹಾಗೂ ಕೈಗೆಟುಕುವ ಚಿಕಿತ್ಸೆ ದೊರಕಿಸುವುದು ಸರ್ಕಾರದ ಗುರಿಯಾಗಿದೆ ಎಂದು ಶರಣಪ್ರಕಾಶ ಪಾಟೀಲ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ/ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರು–ಉಪಕರಣಗಳ ಬೇಡಿಕೆ: ಸಚಿವ ಶಿವರಾಜ ತಂಗಡಗಿ ಭರವಸೆ