ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ : ದಾಂಡೇಲಿಯಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗೋದಾವರಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ರಾಘವೇಂದ್ರ ನಾಯಕರವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಜತ ಗೌರವ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗೋದಾವರಿ ಸಹಕಾರಿಯ ಮೂಲಕ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸಹಕಾರಿ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಸಹಕಾರ ಚಳವಳಿಯನ್ನು ಬಲಪಡಿಸುವಲ್ಲಿ, ಜನಸಾಮಾನ್ಯರ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಿದ ಅವರ ಕಾರ್ಯವನ್ನು ಸಮ್ಮೇಳನದಲ್ಲಿ ಪ್ರಶಂಸಿಸಲಾಯಿತು.
ಸಮ್ಮೇಳನದ ಸರ್ವಾಧ್ಯಕ್ಷರಾದ ರೋಹಿದಾಸ್ ನಾಯಕ, ಉತ್ತರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎನ್. ವಾಸರೆ ಸೇರಿದಂತೆ ಅನೇಕ ಗಣ್ಯಾತಿಗಣ್ಯರು, ಸಾಹಿತಿಗಳು ಹಾಗೂ ಪ್ರತಿಷ್ಠಿತರು ರಾಘವೇಂದ್ರ ನಾಯಕರವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಭವ್ಯವಾಗಿ ಸನ್ಮಾನಿಸಿದರು.
ಈ ಗೌರವದಿಂದ ಗೋದಾವರಿ ಸಮೂಹ ಸಂಸ್ಥೆಗಳ ಸಾಧನೆಗೆ ಮತ್ತಷ್ಟು ಉತ್ತೇಜನ ದೊರೆತಿದ್ದು, ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಪ್ರೇರಣೆಯಾದಂತಾಗಿದೆ.
ಇದನ್ನೂ ಓದಿ/ ಕಾರವಾರದಲ್ಲಿ ಇನ್ನೊಂದು ತಿಂಗಳಲ್ಲಿ ಕ್ಯಾನ್ಸರ್ ಆಸ್ಪತ್ರೆ ಆರಂಭ: ಸಚಿವ ಶರಣಪ್ರಕಾಶ ಪಾಟೀಲ್


