ಸುದ್ದಿ ಬಿಂದು ಬ್ಯೂರೋ ವರದಿ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಬಳಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ಸಹೋದರರಿಬ್ಬರು ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮದನ ನಾರಾಯಣ ಖಾರ್ವಿ (17) ಹಾಗೂ ಸುಜನ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ. ಸ್ಥಳೀಯ ನಿವಾಸಿಗಳಾದ ಈ ಸಹೋದರರು ಪಾತಿ ದೋಣಿಯಲ್ಲಿ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿದ್ದರು ಎನ್ನಲಾಗಿದೆ.
ಈ ವೇಳೆ ಸಮುದ್ರದಲ್ಲಿ ಅಕಸ್ಮಿಕವಾಗಿ ಅಲೆಗಳ ತೀವ್ರತೆ ದೋಣಿ ನಿಯಂತ್ರಣ ತಪ್ಪಿ ಮುಳುಗಿದೆ. ದೋಣಿಯಲ್ಲಿದ್ದ ಇಬ್ಬರೂ ಸಹೋದರರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯದ ಬಳಿಕ ಮೃತದೇಹಗಳನ್ನು ಹೊರತೆಗೆಯಲಾಗಿದೆ.ಈ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.ಈ ದುರಂತದಿಂದಾಗಿ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ/ಡಿ ಕೆ ಶಿವಕುಮಾರ ಪಿಎಸ್ ಕಾರು ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು


