ಸುದ್ದಿಬಿಂದು ಬ್ಯೂರೋ ವರದಿ
ನವದೆಹಲಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂಬ ವದಂತಿಗಳಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸ್ಪಷ್ಟನೆ ನೀಡಿದ್ದು, ಇಂತಹ ಹೇಳಿಕೆಗಳಿಗೆ ಯಾವುದೇ ವೈಜ್ಞಾನಿಕ ಆಧಾರ ಇಲ್ಲ ಎಂದು ಹೇಳಿದೆ.

ದೇಶದಲ್ಲಿ ಲಭ್ಯವಿರುವ ಮೊಟ್ಟೆಗಳು ಸಂಪೂರ್ಣವಾಗಿ ಸೇವನೆಗೆ ಯೋಗ್ಯವಾಗಿದ್ದು, ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ತಿಳಿಸಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಎಫ್‌ಎಸ್‌ಎಸ್‌ಎಐ, ಮೊಟ್ಟೆ ಸೇವನೆ ಮತ್ತು ಕ್ಯಾನ್ಸರ್ ನಡುವೆ ನೇರ ಸಂಬಂಧವಿದೆ ಎನ್ನುವ ಕೆಲವು ವರದಿಗಳು ಜನರನ್ನು ತಪ್ಪು ದಾರಿಗೆ ಎಳೆಯುವಂತಿವೆ ಎಂದು ಎಚ್ಚರಿಕೆ ನೀಡಿದೆ. ಅವೈಜ್ಞಾನಿಕ ಮಾಹಿತಿಯನ್ನು ಆಧರಿಸಿದ ಈ ರೀತಿಯ ಸುದ್ದಿಗಳು ಸಾರ್ವಜನಿಕರಲ್ಲಿ ಅನಾವಶ್ಯಕ ಭಯ ಮೂಡಿಸುತ್ತಿದ್ದು, ಇವುಗಳಿಗೆ ಕಿವಿಗೊಡಬಾರದು ಎಂದು ಪ್ರಾಧಿಕಾರ ಮನವಿ ಮಾಡಿದೆ.

ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮೊಟ್ಟೆ ಆರೋಗ್ಯಕರ ಆಹಾರದ ಭಾಗವಾಗಿದ್ದು, ಸಮತೋಲನ ಆಹಾರದಲ್ಲಿ ಇದರ ಸೇವನೆ ಸುರಕ್ಷಿತವಾಗಿದೆ ಎಂದು ಎಫ್‌ಎಸ್‌ಎಸ್‌ಎಐ ಪುನರುಚ್ಚರಿಸಿದೆ

ಇದನ್ನೂ ಓದಿ/ಕರಾವಳಿ ಉತ್ಸವಕ್ಕೆ ಯಾರಾರು ಬರ್ತಿದ್ದಾರೆ ಗೊತ್ತಾ..?