ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕರಾವಳಿ ಉತ್ಸವದಲ್ಲಿ ಇಂದು ಸಂಜೆ 5.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉದ್ಘಾಟನಾ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಹಲವು ಗಣ್ಯರು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಇನ್ನು ಉದ್ಘಾಟನೆಗೂ ಮುನ್ನ ಕಾರವಾರ ನಗರದಲ್ಲಿ ಕಲಾ ತಂಡಗಳ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನೆಯ ನಂತರ ಪ್ರಸಿದ್ದ ಗಾಯಕ ಶಂಕರ್ ಮಹಾದೇವನ್ ರವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.