
ಸುದ್ದಿಬಿಂದು ಬ್ಯೂರೋ ವರದಿ
ಚಿತ್ರದುರ್ಗ : ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅಪಘಾತಕ್ಕೀಡಾದ ಬಸ್‌ನೊಳಗಿಂದ ಇದುವರೆಗೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಒಟ್ಟು 9ಮಂದಿ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸದ್ಯದ ಮಾಹಿತಿಯಂತೆ ಲಾರಿ ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಓರ್ವ ಮಗು ಕೂಡ ಸೇರಿದೆ ಎಂದು ಅವರು ಸ್ಪಷ್ಟಪಡಿಸಿದರು.
ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಶಿರಾ ಹಾಗೂ ಹಿರಿಯೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಗಂಭೀರತೆಯನ್ನು ಗಮನಿಸಿ ಬೆಂಗಳೂರಿನಿಂದ DNA ಹಾಗೂ ಸುಕೋ (SUKO) ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ರಕ್ಷಣಾ ಹಾಗೂ ಪರಿಶೀಲನಾ ಕಾರ್ಯಾಚರಣೆ ಮುಂದುವರಿದಿದ್ದು, ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.




