ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ (ಭಾನುವಾರ) ಕಾರವಾರಕ್ಕೆ ಭೇಟಿ ನೀಡಲಿದ್ದಾರೆ.

ನಾಳೆ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಗೋವಾದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲಿದ್ದು, ಸಂಜೆ 6.30ಕ್ಕೆ ದಾಬೋಲಿಂನಿಂದ ರಸ್ತೆ ಮಾರ್ಗದ ಮೂಲಕ ಕಾರವಾರಕ್ಕೆ ಆಗಮಿಸಲಿದ್ದಾರೆ. ರಾತ್ರಿ 7 ಗಂಟೆಗೆ ಕರಾವಳಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ರಾತ್ರಿ 9 ಗಂಟೆಗೆ ಕಾರ್ಯಕ್ರಮ ಮುಗಿಸಿ ದಾಬೋಲಿಂ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.

ಉಪಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಉತ್ಸವ ನಡೆಯುವ ಸ್ಥಳ ಹಾಗೂ ನಗರ ವ್ಯಾಪ್ತಿಯಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಕರಾವಳಿ ಭಾಗದ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿರುವ ಕರಾವಳಿ ಉತ್ಸವಕ್ಕೆ ಡಿಕೆ ಶಿವಕುಮಾರ್ ಅವರ ಆಗಮನದಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಹೊಸ ಉತ್ಸಾಹ ಮೂಡಲಿದೆ ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ