ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ನಡೆದ ರಂಜಿತಾ ಬನ್ಸೋಡೆ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ. ವಿಜಯೇಂದ್ರ ಅವರು ಇಂದು ಯಲ್ಲಾಪುರಕ್ಕೆ ಭೇಟಿ ನೀಡಲಿದ್ದಾರೆ.

ಇಂದು ಮಧ್ಯಾಹ್ನ 3.30 ಗಂಟೆಗೆ ಹತ್ಯೆಯಾದ ರಂಜಿತಾ ಬನ್ಸೋಡೆ ಅವರ ಅಂತಿಮ ದರ್ಶನ ಪಡೆಯಲಿರುವ ವಿಜಯೇಂದ್ರ ಅವರು, ಬಳಿಕ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಯಲ್ಲಾಪುರದಲ್ಲಿ ನಡೆದಿರುವ ಈ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರು ಮಾಹಿತಿ ಪಡೆಯುವ ಸಾಧ್ಯತೆ ಇದೆ. ಆದರೆ ಕೊನೆ ಕ್ಷಣದಲ್ಲಿ ಬದಲಾವಣೆ ಆದ್ರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ..

ಅಲ್ಲದೇ, ಕುಟುಂಬದ ದುಃಖದಲ್ಲಿ ಭಾಗಿಯಾಗಿ ನ್ಯಾಯ ಒದಗಿಸುವ ಭರವಸೆಯನ್ನು ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಕಾಳಮ್ಮನಗರದಲ್ಲಿ ನಡೆದ ಈ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ವಿಜಯೇಂದ್ರ ಅವರ ಭೇಟಿ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ/ರಂಜಿತಾ ಕೊಲೆ ಮಾಡಿದ ರಫೀಕ್ ಸೂಸೈಡ್..