ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ನಡೆದಿದ್ದ ವಿವಾಹಿತ ಮಹಿಳೆಯ ಭೀಕರ ಕೊಲೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಕೊಲೆ ಆರೋಪಿಯಾಗಿದ್ದ ರಫೀಕ್ ಎಂಬಾತನು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಯಲ್ಲಾಪುರ ಪಟ್ಟಣದ ಖಾಜಲ್‌ವಾಡ ಅರಣ್ಯ ಪ್ರದೇಶದಲ್ಲಿ ರಫೀಕ್ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸ ಮೂಲಗಳಿಂದ ತಿಳಿದುಬಂದಿದೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ಮಧ್ಯಾಹ್ನ ಕಾಳಮ್ಮನಗರದಲ್ಲಿ ರಂಜಿತಾ ಎಂಬ ವಿವಾಹಿತ ಮಹಿಳೆಯ ಕತ್ತು ಸೀಳಿ ರಫೀಕ್ ಕೊಲೆ ಮಾಡಿ. ಘಟನೆ ಬಳಿಕ ಆರೋಪಿ ರಫೀಕ್ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಆದರೆ ಶೋಧದ ಮಧ್ಯೆಯೇ ಆರೋಪಿ ಆತ್ಮಹತ್ಯೆಗೆ ಶರಣಾಗಿರುವುದು ದೃಢಪಟ್ಟಿದೆ.