ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಪ್ರೇಮವ್ಯಥೆಯಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಪವನ್ ಭಟ್ (24) ಎಂದು ಗುರುತಿಸಲಾಗಿದೆ. ಪವನ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದರೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದನು ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ನಿರಾಕರಣೆಯಿಂದ ಮನನೊಂದ ಪವನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಕುರಿತು ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ/ ಚಿನ್ನ ಕಳೆದು ಕಣ್ಣೀರು ಹಾಕಿದ ಮಹಿಳೆ : ಒಂದು ಗಂಟೆಯಲ್ಲಿ ನಗು ತಂದ ಕುಮಟಾ ಪೊಲೀಸರು


