ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದಲ್ಲಿ ಇರುವ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ದುಷ್ಕರ್ಮಿಗಳು ದರೋಡೆ ನಡೆಸಲು ಯತ್ನಿಸಿದ ಘಟನೆ  ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 52ಕ್ಕೆ ಹೊಂದಿಕೊಂಡಿರುವ ಬ್ಯಾಂಕ್ ಕಟ್ಟಡದ ಹಿಂಭಾಗದ ಶೌಚಾಲಯದ ಗೋಡೆಯನ್ನು ಕೊರೆದು ಒಳಪ್ರವೇಶಿಸಲು ಯತ್ನಿಸಿದ ದುಷ್ಕರ್ಮಿಗಳು, ಬಳಿಕ ಸ್ಟ್ರಾಂಗ್ ರೂಮ್ ಗೋಡೆಯನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಹಣ ಅಥವಾ ಮೌಲ್ಯವಸ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗದೇ ದರೋಡೆ ಯತ್ನ ವಿಫಲಗೊಂಡಿದೆ.

ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿ ಶಾಖೆ ತೆರೆಯಲು ಬಂದ ವೇಳೆ ಗೋಡೆಗೆ ಹಾನಿಯಾದ ಗುರುತು ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯಿಂದ ಬ್ಯಾಂಕ್ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ.

ಸ್ಥಳಕ್ಕೆ ಅಂಕೋಲಾ ಸಿಪಿಐ ಚಂದ್ರಶೇಖರ ಮಠಪತಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶಂಕಿತರ ಪತ್ತೆಗೆ ತನಿಖೆ ಚುರುಕುಗೊಂಡಿದೆ.

ಇದನ್ನೂ ಓದಿ/ನರೇಗಾ ತಿದ್ದುಪಡಿ ವಿರುದ್ಧ ಮಂಕಾಳ್ ವೈದ್ಯ ಆಕ್ರೋಶ: ಬಡವರ ಬದುಕಿಗೆ ಬೆಂಕಿ ಇಟ್ಟ ಕೇಂದ್ರ ಸರಕಾರ