ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಗೋಕರ್ಣ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖಾದರ ಬಾಷಾರವರನ್ನು ಕುಮಟಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು ಅಧಿಕಾರ ಸ್ವೀಕರಿಸಿದ್ದಾರೆ.

ಗೋಕರ್ಣದಲ್ಲಿ ಸೇವೆ ಸಲ್ಲಿಸುವ ಅವಧಿಯಲ್ಲಿ ಪಿ.ಎಸ್.ಐ. ಖಾದರ ಬಾಷಾ ಅವರು ತಮ್ಮದೇ ವಿನೂತನ ಕ್ರಮಗಳು ಹಾಗೂ ಜನಸ್ನೇಹಿ ಕಾರ್ಯಶೈಲಿಯ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮಾದಕ ಪದಾರ್ಥಗಳ ಬಳಕೆ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ನಿಗಾ ವಹಿಸಿ, ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅನೇಕ ಅಪರಾಧ ಪ್ರಕರಣಗಳನ್ನು ಭೇದಿಸಿ ಪೊಲೀಸ್ ಇಲಾಖೆಗೆ ಉತ್ತಮ ಹೆಸರು ತಂದಿದ್ದರು.

ಬಾಷಾ ಅವರ ವರ್ಗಾವಣೆಯಿಂದಾಗಿ ಹಾಲಿ ಗೋಕರ್ಣ ಪೊಲೀಸ್ ಠಾಣೆಯ ಪಿ.ಎಸ್.ಐ. ಹುದ್ದೆ ಖಾಲಿಯಾಗಿದ್ದು, ಅವರ ಸ್ಥಳಕ್ಕೆ ಇದುವರೆಗೆ ಯಾರನ್ನೂ ನಿಯೋಜನೆ ಮಾಡಲಾಗಿಲ್ಲ.

ಇದನ್ನೂ ಓದಿ/ಗೋಕರ್ಣ ಕಡಲ ತೀರದಲ್ಲಿ ಪ್ರವಾಸಿಗರ ಜೀವ ರಕ್ಷಣೆ: ಜೀವ ರಕ್ಷಕ ಸಿಬ್ಬಂದಿಗಳಿಂದ ಕಾರ್ಯಾಚರಣೆ