ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ಇಲ್ಲಿಮ ಮುಖ್ಯ ಕಡಲ ತೀರದಲ್ಲಿ ಸಮುದ್ರದ ಅಲೆಗೆ ಸಿಲುಕಿದ್ದ ದಾವಣಗೆರೆ ಮೂಲದ ಪ್ರವಾಸಿಗನ ರಕ್ಷಣೆ ಮಾಡಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಪರಶುರಾಮ ರಾಜಪ್ಪ (21) ಎಂಬಾತನೆ ಅಪಾಯದಿಂದ ಪಾರಾಗಿರುವ ಯುವಕನಾಗಿದ್ದಾನೆ. ಆರು ಜನ ಸ್ನೇಹಿತರೊಂದಿಗೆ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದು, ಮುಖ್ಯ ಕಡಲ ತೀರದಲ್ಲಿ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ. ಇದನ್ನ ಗಮನಿಸಿದ ಕರ್ತವ್ಯ ನಿರತ ಜೀವ ರಕ್ಷಕ ಸಿಬ್ಬಂದಿಗಳು ತಕ್ಷಣ ಸಮುದ್ರಕ್ಕೆ ಧುಮುಕಿ ಕಾರ್ಯಾಚರಣೆ ನಡೆಸಿ ಆತನನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಜೀವ ರಕ್ಷಣಾ ಕಾರ್ಯದಲ್ಲಿ ಲೋಕೇಶ ಹರಿಕಂತ್ರ, ಶಿವಪ್ರಸಾದ್ ಅಂಬಿಗ, ರೋಷನ್ ಖಾರ್ವಿ, ಮೋಹನ ಅಂಬಿಗ ಅವರು ಪ್ರಮುಖ ಪಾತ್ರವಹಿಸಿದ್ದು, ಬೀಚ್ ಸೂಪರ್ವೈಸರ್ ರವಿ ನಾಯ್ಕ್ ಹಾಗೂ ಪ್ರವಾಸಿ ಮಿತ್ರ ಶೇಖರ್ ಹರಿಕಂತ್ರ ರಕ್ಷಣಾ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ. ಅಲ್ಲದೇ ಗೋಕರ್ಣ ಮೇನ್ ಬೀಚ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಗಳಾದ ಅಶೋಕ್ ಹೊಸಕಟ್ಟ, ಕಮಲಾಕರ್ ಹೊಸಕಟ್ಟ, ಜೆಸ್ಕಿ ಡ್ರೈವರ್ ದರ್ಶನ್ ಲಕ್ಕುಮನೆ, ದೀಪಕ್ ಗೌಡ ಹಾಗೂ ಗೃಹರಕ್ಷಕ ಸಿಬ್ಬಂದಿ ಲಿಂಗರಾಜ ಗೌಡ ಭಾಗವಹಿಸಿದ್ದರು.
ಪ್ರವಾಸಿಗನ ರಕ್ಷಣೆ ಮಾಡಿರುವುದಕ್ಕೆ, ಸ್ಥಳೀಯರು ಹಾಗೂ ಪ್ರವಾಸಿಗರು ಜೀವ ರಕ್ಷಕ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ/ತಿಂಡಿ ಪ್ಯಾಕೆಟ್‌ನೊಳಗಿನ ಆಟಿಕೆ ಸ್ಫೋಟ : ಶಾಶ್ವತವಾಗಿ ಕಣ್ಣು ಕಳೆದುಕೊಂಡ ಎಂಟು ವರ್ಷದ ಬಾಲಕ


