ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ: ಇಲ್ಲಿನ ವೆಂಕಟಾಪುರ ಸಮೀಪದ ಹನಿಫಾಬಾದ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರೂ ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಧ್ಯರಾತ್ರಿ ಸುಮಾರಿಗೆ ಶಿರಾಲಿಯಿಂದ ಭಟ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು,
ಅಪಘಾತದಲ್ಲಿ ಭಟ್ಕಳದ ಆಜಾದ್ ನಗರ ನಿವಾಸಿಗಳಾದ ಬಿಲಾಲ್ (17) ಮತ್ತು ಅಯಾನ್ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ಅಯಾನ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಉಡುಪಿಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಅಯಾನ್ ಮಂಗಳೂರಿನ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ.

ಬಿಲಾಲ್ ಅವರ ಮೃತದೇಹವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗಲಿದೆ.ಘಟನೆಯ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ/ರಿಶೇಲ್ ಆತ್ಮಹತ್ಯೆ ಪ್ರಕರಣ: ತನಿಖಾ ಲೋಪ ಆರೋಪ  ಪಿಎಸ್ಐ ಅಮಾನತು