ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಆದೇಶ ಹೊರಡಿಸಿದ್ದಾರೆ.

ರಾಜ್ಯಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಈ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಅಧಿಕಾರಿಯ ಕಾರ್ಯವೈಖರಿಯ ಬಗ್ಗೆ ಮೃತಳ ಕುಟುಂಬದಿಂದ‌ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ತನಿಖೆಯ ಸಂದರ್ಭದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳದೇ ಇರುವುದರ ಜೊತೆಗೆ ಸಾಕ್ಷ್ಯ ಸಂಗ್ರಹದಲ್ಲಿ ಗಂಭೀರ ಲೋಪವಾಗಿದೆ ಎಂಬ ಆರೋಪಗಳು ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ಆಂತರಿಕ ತನಿಖೆ ನಡೆಸಿದ ಎಸ್‌ಪಿ ದೀಪನ್, ತನಿಖೆಯಲ್ಲಿ ಕಂಡುಬಂದ ವೈಫಲ್ಯಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿಸಿದ ಪಿಎಸ್ಐ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡುವಂತೆ ಆದೇಶಿಸಿದ್ದಾರೆ.

ಪ್ರಕರಣದ ಮುಂದಿನ ತನಿಖೆಯನ್ನು ಇತರ ಅಧಿಕಾರಿಗಳ ಮೂಲಕ ಸಮಗ್ರವಾಗಿ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ/ಶಿರಸಿ ಜಾತ್ರೆ ಮೂಲಭೂತ ಸೌಕರ್ಯಕ್ಕೆ ಆಗ್ರಹ: ಫೆ.3ರಿಂದ ಅನಂತಮೂರ್ತಿ ಹೆಗಡೆ ಉಪವಾಸ ಸತ್ಯಾಗ್ರಹ