ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳ ಹೆದ್ದಾರಿ ಬದಿಯ ಗ್ರಾಮೀಣ ಪ್ರದೇಶಗಳಲ್ಲಿ ಕಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಹೆದ್ದಾರಿ ಪಕ್ಕದಲ್ಲಿರುವ ಅಂಗಡಿಗಳು ಹಾಗೂ ಮನೆಗಳೇ ಕಳ್ಳರ ಮುಖ್ಯ ಟಾರ್ಗೆಟ್ ಆಗಿದೆ.

ಹಗಲು ವೇಳೆಯಲ್ಲಿ ವ್ಯಾಪಾರದ ನೆಪದಲ್ಲಿ ಅಂಗಡಿ ಹಾಗೂ ಮನೆಗಳಿಗೆ ಬಂದು ಪರಿಸ್ಥಿತಿಯನ್ನು ಗಮನಿಸುತ್ತಿರುವ ಅಪರಿಚಿತರು, ರಾತ್ರಿ ವೇಳೆ ಕಳ್ಳತನ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದೆ. ಈ ಕೃತ್ಯಗಳಿಂದಾಗಿ ವ್ಯಾಪಾರಸ್ಥರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ರಾತ್ರಿ ವೇಳೆ ಪೊಲೀಸ್ ಗಸ್ತು ಇನ್ನಷ್ಟು ಬಲಪಡಿಸುವ ಅಗತ್ಯವಿದ್ದು, ಹೆದ್ದಾರಿ ಬದಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚು ಅಲರ್ಟ್ ಆಗಿ ಕಾರ್ಯನಿರ್ವಹಿಸಬೇಕಿದೆ. ಕಳ್ಳತನ ಪ್ರಕರಣಗಳ ಪತ್ತೆ ಹಾಗೂ ತಡೆಗೆ ನಿರಂತರ ಗಸ್ತು ಅತ್ಯಗತ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹ ಕೂಡ ಆಗಿದೆ.

ಇನ್ನೊಂದೆಡೆ, ಅಪರಿಚಿತ ವ್ಯಕ್ತಿಗಳ ಚಲನವಲನಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಎಚ್ಚರವಹಿಸುವುದು ಸಹ ಅಷ್ಟೆ ಮುಖ್ಯವಾಗಿದರ. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದಲ್ಲಿ ಆಗಬಹುದಾಗ ಕೃತ್ಯವನ್ನ ತಡೆಯುವುದು ಪೊಲೀಸರಿಗೂ ಸುಲಭವಾಗಲಿದೆ.

ಕಳ್ಳತನ ಪ್ರಕರಣಗಳ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದ್ದು, ಜಾಗೃತಿಯಿಂದ ಮಾತ್ರ ಇಂತಹ ಅಪರಾಧಗಳನ್ನು ತಡೆಯಲು ಸಾಧ್ಯವಾಗಬಹುದಾಗಿದೆ.

ಇದನ್ನೂ ಓದಿ/ಅನೈತಿಕ ಸಂಬಂಧ..ಕಾಡಿನಲ್ಲಿ ಭೀಕರ ಕೃತ್ಯ..!ಹಿಗ್ಗಾಮುಗ್ಗ ಥಳಿಸಿದ ವಿಡಿಯೋ ವೈರಲ್