ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ತಾಲೂಕಿನ ಮಾಸೂರು ಗ್ರಾಮದಲ್ಲಿ ಪುಡಿ ರೌಡಿಯೊಬ್ಬ ನಡು ರಸ್ತೆಯಲ್ಲೇ ರಂಪಾಟ ನಡೆಸಿ ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಪೊಲೀಸರು ಹೊನ್ನಾವರದ ಗುಣವಂತೆಯ ಸಂಬಂಧಿಕರ ಮನೆಯಲ್ಲಿ ಆರೋಪಿಯನ್ನ ಬಂಧಿಸಿದ್ದು ನ್ಯಾಯಾಲಯ ಆರೋಪಿಗೆ ಫೆಬ್ರವರಿ 5ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈ ಘಟನೆಗೆ ಸಂಬಂಧಿಸಿದ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಿನ್ನೆಲೆಯಲ್ಲಿ ಪ್ರಕರಣ ಹೆಚ್ಚಿನ ಚರ್ಚೆಗೆ ಕಾರಣವಾಗಿತ್ತು. ಘಟನೆಯ ಬಳಿಕ ಆರೋಪಿತ ಮಹೇಶ ಹೊನ್ನಪ್ಪ ಪಟಗಾರ ತಲೆಮರಿಸಿಕೊಂಡಿದ್ದ, ತನಿಖೆಯನ್ನು ಚುರುಕುಗೊಳಿಸಿದ್ದ ಪೊಲೀಸರು ಆರೋಪಿತನ ಪತ್ತೆಗೆ ಶೋಧ ಕಾರ್ಯ ನಡೆಸಿದ್ದರು.
ಪ್ರಕರಣದ ತನಿಖಾಧಿಕಾರಿಗಳಾದ ಪಿಎಸ್ಐ ಖಾದರ್ ಭಾಷಾ ಅವರು ಸಿಬ್ಬಂದಿಗಳಾದ ಕಿರಣ ಗಣೇಶ್ ಹಾಗೂ ಶಿವಾನಂದ್ ಅವರ ತಂಡ ಆರೋಪಿ ಗುಣವಂತೆಯಲ್ಲಿ ವಾಸವಾಗಿರುವುದನ್ನ ಖಚಿತ ಪಡಿಸಿಕೊಂಡು ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ನನ್ಯಾಯಾಲ ಆರೋಪಿಗೆ ಫೆಬ್ರವರಿ 05ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದನ್ನೂ ಓದಿ/ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ವೈದ್ಯ ಆತ್ಮಹತ್ಯೆ


