ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಕಾರವಾರ ತಾಲೂಕಿನ ಬಿಣಗಾ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕಾರವಾರದಿಂದ ಅಂಕೋಲಾ ಕಡೆಗೆ ಸಾಗುತ್ತಿದ್ದ ಡಾಂಬರ್ ಟ್ಯಾಂಕರ್, ಬಿಣಗಾ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಟ್ಯಾಂಕರ್ ಬೈಕ್ ಸವಾರನ ತಲೆಯ ಮೇಲೆ ಹರಿದು ಹೋಗಿದ್ದು, ಸ್ಥಳದಲ್ಲೇ ಸವಾರ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ತಕ್ಷಣ ಕಾರವಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ., ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಹೆದ್ದಾರಿಯಲ್ಲಿ ನಿರಂತರವಾಗುತ್ತಿರುವ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.
ಇದನ್ನೂ ಓದಿ/ವೈದ್ಯ ಆತ್ಮಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ ಮೂವರ ಬಂಧನ


