ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಲೋಕಾಯುಕ್ತ ಪೊಲೀಸರು ನಡೆಸಿದ ಭರ್ಜರಿ ಬಲೆಗೆ (karnataka) ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಸಿಕ್ಕಿಬಿದ್ದಿದ್ದಾರೆ. ಲಂಚ ಸ್ವೀಕರಿಸುತ್ತಿದ್ದ ವೇಳೆ ಚಾಮರಾಜಪೇಟೆಯ ಸಿಎಆರ್ (CAR) ಮೈದಾನದಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಟ್ರ್ಯಾಪ್ ಸಮಯದಲ್ಲಿ(Karnataka) ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿ ಗಲಾಟೆ ನಡೆಸಿದ್ದು, ಆ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಘಟನೆ ಹಿನ್ನೆಲೆ ಏನು?
ಹಣ ಹೂಡಿಕೆ ಸಂಬಂಧಿತ ವಂಚನೆ ಪ್ರಕರಣವೇ ಈ ಬೆಳವಣಿಗೆಗೆ ಕಾರಣವಾಗಿದೆ. ಧನರಾಜ್ ಎಂಬವರು ಕೆ.ಪಿ. ಅಗ್ರಹಾರ (Karnataka)ಪೊಲೀಸ್ ಠಾಣೆಗೆ ದೂರು ನೀಡಿದ್ದು, ಲಾಭದ ಆಮಿಷವೊಡ್ಡಿ ಸೂರಜ್, ಸುಜನ್ ಹಾಗೂ ಶ್ರೀನಿವಾಸ್ ಎಂಬವರು ತಮ್ಮಿಂದ ಸುಮಾರು 19 ಲಕ್ಷ ರೂ. ಪಡೆದು ವಂಚನೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಣ ಹಿಂದಿರುಗಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ಜನವರಿ 22ರಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ಸ್ಪೆಕ್ಟರ್ ಮೇಲೆ ಏನು ಆರೋಪ?
ಈ ಪ್ರಕರಣದ ತನಿಖೆ ವೇಳೆ ಇನ್ಸ್ಪೆಕ್ಟರ್ ಗೋವಿಂದರಾಜು ನೇತೃತ್ವದ ಪೊಲೀಸ್ ತಂಡ ಆರೋಪಿಗಳ ಮನೆಗೆ ತೆರಳಿದ್ದು, ಅಲ್ಲಿ ಗಲಾಟೆ ನಡೆದಿತ್ತು. ಬಳಿಕ ಠಾಣಾ ಮಟ್ಟದಲ್ಲಿ ಪ್ರಕರಣವನ್ನು ‘ಸೆಟಲ್’ ಮಾಡುವ ನೆಪದಲ್ಲಿ, ಬಡ್ಸ್ ಕಾಯ್ದೆಯಡಿ ದಾಖಲಾಗಿದ್ದ ಕೇಸ್ನಿಂದ ಬಿಡಿಸಲು ಹಾಗೂ ಬಂಧನ ತಪ್ಪಿಸಲು 5 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ಲೋಕಾಯುಕ್ತ ಪೊಲೀಸರಿಗೆ ತಲುಪುತ್ತಿದ್ದಂತೆ ಟ್ರ್ಯಾಪ್ ಮಾಡಿರುವುದು, ಇನ್ಸ್ಪೆಕ್ಟರ್ ಬಂಧನಕ್ಕೆ ಕಾರಣವಾಯಿತು.
ಇದನ್ನೂ ಓದಿ/ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ : ಚೆನೈನಲ್ಲಿ ಚಿರಾಗ್ಗೆ ಬಂಧಿಸಿದ ಪೊಲೀಸರು


