ಸುದ್ದಿಬಿಂದು ಬ್ಯೂರೋ ವರದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿತ ಯಾವುದೇ ಆಸ್ಪತ್ರೆಗಳು ಅರ್ಹ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ನಿರಾಕರಿಸಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂಬಂಧ ಜಿಲ್ಲೆಯ ಎಲ್ಲ ಸಂಬಂಧಿತ ಆಸ್ಪತ್ರೆಗಳಿಗೆ ಅಧಿಕೃತ ಪತ್ರವನ್ನು ರವಾನಿಸಲಾಗಿದ್ದು, ಯೋಜನೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆಯುಷ್ಮಾನ್ ಭಾರತ್ ಕಾರ್ಡ್ ಹೊಂದಿರುವುದು ಕಡ್ಡಾಯವಲ್ಲ. ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಇದ್ದರೆ ಸಾಕು ಎಂದು ತಿಳಿಸಿದ್ದಾರೆ.

ಇನ್ನೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್‌ಎಚ್‌ಎಂ (ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಬಾಕಿಯಾಗಿದ್ದ ಮೂರು ತಿಂಗಳ ವೇತನಕ್ಕಾಗಿ ಒಟ್ಟು ₹9.67 ಕೋಟಿ ಮೊತ್ತವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ ಎಂದು ಡಾ. ತಿಮ್ಮಯ್ಯ ಹೇಳಿದರು.

ಇದನ್ನೂ ಓದಿ/Breaking/BEO ಭೇಟಿ ಬಳಿಕ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ