ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಸುಳಿಗೆ ಸಿಲುಕಿ ದಡ ಸೇರಲಾಗದೆ ಮುಳುಗುವ ಸ್ಥಿತಿಯಲ್ಲಿದ್ದ ಮೂವರು ಪ್ರವಾಸಿಗರನ್ನು ಜೀವ ರಕ್ಷಕ ಸಿಬ್ಬಂದಿ ಹಾಗೂ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ರಕ್ಷಿಸಿದ ಘಟನೆ ಗೋಕರ್ಣದ ಮೇನ್ ಬೀಚ್ನಲ್ಲಿ ನಡೆದಿದೆ.
ಆರು ಮಂದಿ ಸ್ನೇಹಿತರು ಸಮುದ್ರದಲ್ಲಿ ಈಜಾಡುತ್ತಿದ್ದರು. ಈ ಸಂದರ್ಭದಲ್ಲಿ ಸುಳಿಗೆ ಸಿಲುಕಿದ ಪ್ರವಾಸಿಗರು ದಡಕ್ಕೆ ಬರಲಾಗದೆ ಅಪಾಯಕ್ಕೆ ಸಿಲುಕಿಕ್ಕಿದ್ದರು. ಇದನ್ನ ಗಮನಿಸಿದ ಸಿಬ್ಬಂದಿಗಳು. ತಕ್ಷಣ ಸಮುದ್ರಕ್ಕೆ ಇಳಿದು ಅಪಾಯದಲ್ಲಿದ್ದ ಪ್ರವಾಸಿಗರನ್ನ ರಕ್ಷಣೆ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಹಮದ್ ಅಪ್ಸನ್ ಅಲಿ, ಆಶ್ರಫ್ ಮೆಹಬೂಬ್ ಅಲಿ ಹಾಗೂ ಚಿಕ್ಕಬಳ್ಳಾಪುರ ಮೂಲದ ಶ್ರೀನಿವಾಸ ವೆಂಕಟ ಸ್ವಾಮಿ ಅವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕರ್ತವ್ಯನಿರತ ಜೀವ ರಕ್ಷಕ ಸಿಬ್ಬಂದಿಗಳಾದ ಮೋಹನ್ ಅಂಬಿಗ, ರೋಷನ್ ಖಾರ್ವಿ ಹಾಗೂ ಲೋಕೇಶ್ ಹರಿಕಂತ್ರ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇವರಿಗೆ ಲೈಫ್ಗಾರ್ಡ್ ಮೇಲ್ವಿಚಾರಕ ರವಿ ನಾಯ್ಕ್, ಪ್ರವಾಸಿ ಮಿತ್ರ ಶೇಖರ್ ಹರಿಕಂತ್ರ ಹಾಗೂ ಗೋಕರ್ಣ ಮೇನ್ ಬೀಚ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಗಳಾದ ದೀಪಕ್ ಗೌಡ ಮತ್ತು ಮಹೇಶ್ ಹೊಸಕಟ್ಟೆ ಸಹಕಾರ ನೀಡಿದ್ದಾರೆ.
ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ನಡೆಸಿದ ಜೀವ ರಕ್ಷಕ ಹಾಗೂ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಯ ಪ್ರಯತ್ನದಿಂದ ಮೂವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ/ ಹೆದ್ದಾರಿ ಬಿಟ್ಟು ಡಿವೈಡರ್ ಒಡೆದು ಅಂಗಡಿಗೆ ನುಗ್ಗಿದ ಲಾರಿ; ಮಿರ್ಜಾನ್ನಲ್ಲಿ ಭಾರೀ ಅನಾಹುತ

