ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ತಾಲೂಕಿನ ಮಿರ್ಜಾನ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳಗಿನ ಜಾವ ಸಂಭವಿಸಿದ ಲಾರಿ ಅಪಘಾತದಲ್ಲಿ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ನಡೆದಿದೆ.
ನಿಯಂತ್ರಣ ತಪ್ಪಿದ ಲಾರಿ ಚಾಲಕ ಹೆದ್ದಾರಿಯ ಡಿವೈಡರಗೆ ಡಿಕ್ಕಿ ಹೊಡೆದು ಹೆದ್ದಾರಿ ಪಕ್ಕದಲ್ಲಿದ್ದ ಅಂಗಡಿಗೆ ಗುದ್ದಿಗೆ. ಪರಿಣಾಮ ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಲಾರಿ ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು. ಬಳಿಕ ಹೆದ್ದಾರಿ ಪಕ್ಕದಲ್ಲಿದ್ದ ಅಂಗಡಿಗೆ ಗುದ್ದಿದ ಪರಿಣಾಮ ಅಂಗಡಿಗೆ ಭಾರೀ ಹಾನಿಯಾಗಿದೆ.
ಘಟನೆ ಬೆಳಗಿನ ಜಾವ ನಡೆದಿದ್ದು, ಆ ಸಮಯದಲ್ಲಿ ಅಂಗಡಿ ಮುಚ್ಚಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಘಟನೆ ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ನಿಖರ ಕಾರಣ ಹಾಗೂ ಹಾನಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇದನ್ನೂ ಓದಿ/ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಹಣಕಾಸು, ಉದ್ಯೋಗದಲ್ಲಿ ಯಾರಿಗೆ ಶುಭಯೋಗ?

