ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ : ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಗೋಕರ್ಣದ ದುಬ್ಬನಶಸಿ ಕಡಲತೀರದಲ್ಲಿ ಸಮುದ್ರಕ್ಕೆ ಇಳಿದು ಮೋಜುಮಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಬೆಂಗಳೂರು ಮೂಲದ ಮೂವರು ಪ್ರವಾಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ
ವಿಶ್ವೇಶ್ (24), ಶೋಭಾ ದಾಸ್ (22) ಹಾಗೂ ಮಹ್ಮದ್ ಅಕ್ರಮ್ ಮೃತಪಟ್ಟರು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ 12ಮಂದಿ ಪ್ರವಾಸಕ್ಕಾಗಿ ಗೋಕರ್ಣ ಆಗಮಿಸಿದ್ದರು. ಈ ವೇಳೆ ದುಬ್ಬನಶಸಿ ಕಡಲತೀರಕ್ಕೆ ತೆರಳಿದ್ದ ಪ್ರವಾಸಿಗರು ಸಮುದ್ರಕ್ಕೆ ಇಳಿದು ಮೋಜುಮಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ಸಮುದ್ರದ ಅಲೆ ಸುಳಿಗೆ ಸಿಲುಕಿದ್ದಾರೆ ಎನ್ನಲಾಗಿದೆ.ಈ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ಗೋಕರ್ಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

