ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ‌: ತಾಲೂಕಿಮ ಬೈಲೂರು ಗ್ರಾಮದ ಮೂರುಕಟ್ಟೆ ನಿವಾಸಿ ಈಶ್ವರ ನಾಯ್ಕ ಸಸಿಹಿತ್ತಲ ಅವರಿಗೆ ಸೇರಿದ ಮನೆಗ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಬೆಂಕಿಯ ಕೆನ್ನಾಲಿಗೆ ಮನೆ ಸಂಪೂರ್ಣವಾಗಿ‌ ಸುಟ್ಟುಕರಕಲಾಗಿರುವುದರಿಂದ ಕುಟುಂಬವು ಸಂಕಷ್ಟಕ್ಕೆ ಸಿಲುಕಿದೆ.ಅಗ್ನಿ ಅವಘಡದ ವಿಷಯ ತಿಳಿದ ಮಾಸ್ತಪ್ಪ ನಾಯ್ಕ ಬಲಸೆ ಅವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಮನೆಯನ್ನು ಪರಿಶೀಲಿಸಿರುವುದಲ್ಲದೇ, ಸಂತ್ರಸ್ತ ಕುಟುಂಬದವರಿಗೆ ಧೈರ್ಯ ತುಂಬಿ ಸಾಂತ್ವನ ಹೇಳುವುದರ ಜೊತೆಗೆ ಆರ್ಥಿಕ ನೀಡಿದ್ದಾರೆ.

ಕಷ್ಟದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬದ ನೆರವಿಗೆ ಧಾವಿಸಿ ಸ್ಪಂದಿಸಿದ ಮಾಸ್ತಪ್ಪ ನಾಯ್ಕ ಬಲಸೆ ಅವರ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಬೈಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣ ನಾಯ್ಕ ಬಲಸೆ, ನಾಗರಾಜ್ ನಾಯ್ಕ, ಚೇತನ್ ನಾಯ್ಕ, ಕೃಷ್ಣ ನಾಯ್ಕ ಹಾಗೂ ಭಾಸ್ಕರ ದೇವಾಡಿಗ ಉಪಸ್ಥಿತರಿದ್ದರು.

ಇದನ್ನೂ ಓದಿ//ಮೈತ್ರಿ ಧರ್ಮದ ನಡುವೆಯೇ ಜೆಡಿಎಸ್‌ನ ಮಾಸ್ಟರ್ ಪ್ಲ್ಯಾನ್! 10 ಕ್ಷೇತ್ರಗಳಲ್ಲಿ ಜೆಡಿಎಸ್‌ನಿಂದ ಹೊಸ ಆಟ