ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ: ನಿಲ್ಲಿಸಿಟ್ಟಿದ್ದ ಆಟೋ ರಿಕ್ಷಾಕ್ಕೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾದ ಘಟನೆ ಅಂಕೋಲಾ ತಾಲೂಕಿನ ಮಾದನಗೇರಿ ಹಿಲ್ಲೂರು ಕ್ರಾಸ್ ಬಳಿ ನಡೆದಿದೆ.

ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ಸಂಚರಿಸುತ್ತಿದ್ದ ಲಾರಿ, ರಸ್ತೆ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣವಾಗಿ ಜಖಂಗೊಂಡಿದ್ದು, ಗುರುತಿಸಲಾಗದಷ್ಟು ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಆಟೋದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಲಾರಿಯ ಕ್ಲೀನರ್ ಗಾಯಗೊಂಡಿದ್ದಾನೆ.

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ/ ಲಾರಿಯೊಳಗೆ ಮದ್ಯದ ರಹಸ್ಯ ಸಾಮ್ರಾಜ್ಯ! ಜೊಯಿಡಾದಲ್ಲಿ ಅಬಕಾರಿ ದಾಳಿ