ಕಾರವಾರ: ಬೆಳಕಿನ ಹಬ್ಬ ದೀಪಾವಳಿಯು ಪ್ರತಿಯೊಬ್ಬರ ಬದುಕಿನಲ್ಲಿ ಹೊಸ ಭರವಸೆ, ಸಂತೋಷ, ನೆಮ್ಮದಿ ಹಾಗೂ ಸಮೃದ್ಧಿಯ ಬೆಳಕನ್ನು ತುಂಬಲಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ  ರೂಪಾಲಿ ಎಸ್. ನಾಯ್ಕ ಅವರು ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ದೀಪಾವಳಿ ಎಂದರೆ ಕೇವಲ ದೀಪಗಳ ಹಬ್ಬವಲ್ಲ, ಅದು ಕತ್ತಲೆಯಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದ ಕಡೆಗೆ ಸಾಗುವ ಪವಿತ್ರ ಸಂದೇಶವನ್ನು ಸಾರುವ ಹಬ್ಬವಾಗಿದೆ.ಈ ಶುಭ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆ-ಮನಗಳಲ್ಲಿ ಸಂತೋಷ ನೆಲೆಸಲಿ, ಕುಟುಂಬಗಳಲ್ಲಿ ಪ್ರೀತಿ, ವಿಶ್ವಾಸ ಹಾಗೂ ಸೌಹಾರ್ದತೆ ಹೆಚ್ಚಾಗಲಿ ಎಂದು ಅವರು ಹಾರೈಸಿದ್ದಾರೆ.

ನಾಡಿನ ಜನರ ಬದುಕಿನಲ್ಲಿ ಸುಖ, ಶಾಂತಿ, ಆರೋಗ್ಯ, ಐಶ್ವರ್ಯ ಹಾಗೂ ಯಶಸ್ಸು ಸದಾ ನೆಲೆಸಲಿ. ಸಮಾಜದಲ್ಲಿ ಪರಸ್ಪರ ಸಹಕಾರ, ಸಹಬಾಳ್ವೆ ಮತ್ತು ಸಾಮರಸ್ಯದ ಭಾವನೆ ಬಲಗೊಳ್ಳಲಿ. ದೀಪಾವಳಿಯ ಬೆಳಕು ಎಲ್ಲರ ಜೀವನದಲ್ಲೂ ಹೊಸ ಚೈತನ್ಯ ಮತ್ತು ಉಜ್ವಲ ಭವಿಷ್ಯವನ್ನು ಮೂಡಿಸಲಿ ಎಂದು ತಮ್ಮ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ/ದೀಪಾವಳಿಗೆ ಮೂರು ತಿಂಗಳ ಹಣ ಜಮೆ ಮಾಡುವುದಾಗಿ ಸರ್ಕಾರದ ಭರವಸೆ; ಹಬ್ಬ ಆರಂಭವಾದರೂ ಖಾತೆಗೆ ಬಾರದ ಹಣ