ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಬೆನ್ನಲ್ಲೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ತೀವ್ರ ತಪಾಸಣೆ ನಡೆಸಲಾರಂಭಿಸಿದ್ದಾರೆ.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಗೋಕರ್ಣ, ಮುರುಡೇಶ್ವರ ದಲ್ಲಿ ಪೊಲೀಸ್ ಬಿಗು ತಪಾಸಣೆ ಮಾಡಲಾಗುತ್ತಿದ್ದು, ಹೋಮ್ ಸ್ಟೇ ,ರೆಸಾರ್ಡ್ಗಳಲ್ಲಿ ಪ್ರವಾಸಿಗರ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಹೋಟೆಲ್, ಲಾಡ್ಜ್ , ಹೋಮ್ ಸ್ಟೇ ಗಳಲ್ಲಿ ಕಡ್ಡಾಯ ಸಿಸಿ ಕ್ಯಾಮರ ಅಳವಡಿಕೆಗೆ ಸೂಚಿಸಲಾಗಿದೆ.
ಇನ್ನೂ ಹೊರರಾಜ್ಯ, ವಿದೇಶಿ ಪ್ರವಾಸಿಗರ ಬಗ್ಗೆ ಸಹ ಮಾಹಿತಿ ಕಲೆಹಾಕಲಾಗುತ್ತಿದ್ದು, ಕರಾವಳಿ ಕಾವಲುಪಡೆ , ಭಾರತೀಯ ಕೋಸ್ಟ್ ಗಾರ್ಡ ನಿಂದ ಕೋಮಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು,ಸಮುದ್ರ ಮಾರ್ಗದ ಮೂಲಕ ಶತ್ರುಗಳು ಒಳ ನುಗ್ಗದಂತೆ ತಡೆಯಲು ಸಮುದ್ರ ಮಾರ್ಗದಲ್ಲಿ ಬೋಟುಗಳ ದಾಖಲೆ ತಪಾಸಣೆ ನಡೆಸಲಾಗುತ್ತಿದ್ದು ಕರಾವಳಿ ಕಾವಲುಪಡೆ ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಅರಬ್ಬೀ ಸಮುದ್ರದಲ್ಲಿ ಗಸ್ತು ತಿರುಗುತ್ತಿವೆ ಎನ್ನಲಾಗಿದೆ.
ಇದನ್ನೂ ಓದಿ
- ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್ : ವಿದ್ಯಾರ್ಥಿಗಳು ಸೇರಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ
- ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ನೆರವಿನ ಕೈ ಚಾಚುವಂತೆ ಮನವಿ
- ಹೊನ್ನಾವರದಲ್ಲಿ ಭೀಕರ ದುರಂತ: ಕಾರಿಗೆ ಬೆಂಕಿ, ಇಬ್ಬರು ಸಜೀವ ದಹನ
- ವಿವಾಹಕ್ಕೆ ಒಪ್ಪದ ಪ್ರೇಯಸಿ: ಪವನ್ ಭಟ್ ಆತ್ಮಹತ್ಯೆ
- ಚಿನ್ನ ಕಳೆದು ಕಣ್ಣೀರು ಹಾಕಿದ ಮಹಿಳೆ : ಒಂದು ಗಂಟೆಯಲ್ಲಿ ನಗು ತಂದ ಕುಮಟಾ ಪೊಲೀಸರು


