ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ನಾಳೆ ಜಿಲ್ಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಇನ್ನೂ ನಾಳೆಯಿಂದ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳು ಆರಂಭವಾಗಲಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರೋ ಕಾರಣ, ಸರಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳು ನಾಳೆ ಶಾಲೆಗೆ ಹೋಗದಂತೆ ಸೂಚಿಸಲಾಗಿದೆ. ಇನ್ನೂ ಶಿಕ್ಷಕರು ಹಾಗೂ ಸಿಬ್ಬಂದಿಗಳು ನಾಳೆಯೆ ಶಾಲೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಅಂತಾ ಡಿಡಿಪಿಆಯ್ ಸುದ್ದಿಬಿಂದಿಗೆ ಮಾಹಿತಿ ನೀಡಿದ್ದಾರೆ.
