ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ವಿವಿಧ ಬೇಡಿಕೆಗಳನ್ನ ಇಡೇರಿಸುವಂತೆ ಆಗ್ರಹಿಸಿ ಉತ್ತರಕನ್ನಡ ಜಿಲ್ಲೆಯ ವಸತಿ ಶಾಲೆಗಳ ನೌಕರರ ಸಂಘ (ರಿ) ದಿಂದ ಮೌನ ಮೆರವಣಿಗೆ ನಡೆಸುವ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ ವಸತಿ ಶಾಲೆಗಳ ಖಾಯಂ ಶಿಕ್ಷಕರು,ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಅಥವಾ ಎಸ್.ಸಿ.ಎಸ್.ಟಿ, ಬಿ.ಸಿ ವಸತಿ ಶಾಲೆಗಳನ್ನು ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳಿಗೆ ಒಳಪಡಿಸಬೇಕು
ಖಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು. ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವಂತಾಗಬೇಕುಮ.ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ,ಖಾಯಂ ನೌಕರರಿಗೆ 10% ವಿಶೇಷ ಭತ್ಯೆ ಮಂಜೂರು ಮಾಡುವಂತೆ ಅನೇಕ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪರಿಹಾರ ನೀಡಿಲ್ಲ. ಆದ್ದರಿಂದ ವಸತಿ ಶಾಲೆಗಳ ನೌಕರರ ಸಂಘ(ರಿ). ಬೆಂಗಳೂರು, ವತಿಯಿಂದ ಮೇ 26.ರಿಂದ 28 ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸಹ ನಡೆಸಿದ್ದರು.ಅಷ್ಟೆ ಅಲ್ಲದೆ ನಿನ್ನೆ ಕಪ್ಪು ಪಟ್ಟಿಕಟ್ಟಿಕೊಂಡು ಕರ್ತವ್ಯ ನಿರ್ವಹಿಸಲಾಗಿದೆ. ಆದರೂ ಕೂಡ ಇದುವರಗೆ ಸರಕಾರದಿಂದ ಯಾವುದೇ ಭರವಸೆ ನೀಡಲ್ಲ.
ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಸಹ ಇಂದು ಮೌನಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಸೋಮವಾರದೊಳಗೆ ಯಾವುದೇ ಭರವಸೆ ಸಿಗದೆ ಇದ್ದ ಪಕ್ಷದಲ್ಲಿ ಜಿಲ್ಲಾಧ್ಯಂತ ತರಗತಿ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದರು ಧರಣಿ ನಡೆಸುವುದಾಗಿ
ರಾಜ್ಯ ಉಪಾಧ್ಯಕ್ಷ ಲಕ್ಷ್ಮೀ ಶೆಟ್ಟಿ, ತಿಳಿಸಿದ್ದಾರೆ.
ಇದನ್ನೂ ಓದಿ