ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಜೂನ್ 2ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಟ ಕಮಲ್ ಹಾಸನ್ ಅವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ ನೀಡುವ ಸಾಧ್ಯತೆ ಇದೆ.
ತಮಿಳು ನಟ ಕಮಲ್ ಹಾಸನ್ ಅವರ ಕನ್ನಡ ಭಾಷೆಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ರಾಜ್ಯದಲ್ಲಿ ಭಾರಿ ವಿರೋಧಕ್ಕೆ ಕಾರಣವಾಗಿದೆ. ಕಮಲ್ ಹಾಸನ್ ಹೇಳಿಕೆಯನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳು ಸಜ್ಜಾಗಿದೆ ಎನ್ನಾಗಿದೆ. ಈ ಕಾರಣಕ್ಕಾಗಿ ಜೂನ್ 2ರಂದು ರಾಜ್ಯದಾದ್ಯಂತ ಭಾರಿ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ, ಇದೇ ದಿನವಾದ ಜೂನ್ 2 ಸೋಮವಾರ ಶಾಲಾ ಹಾಗೂ ಕಾಲೇಜುಗಳಿಗೆ ರಜೆ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸೋಮವಾರ ಪ್ರತಿಭಟನೆ ಸಾಧ್ಯತೆ
ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಕನ್ನಡ ಸಂಘಟನೆಗಳು ರಾಜ್ಯದಾದ್ಯಂತ ಭಾರಿ ಪ್ರತಿಭಟನೆಗೆ ಸಜ್ಜಾಗಿವೆ. ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ಅವಮಾನಕರವಾಗಿ ಮಾತನಾಡಿರುವುದರಿಂದ, ಕನ್ನಡಪರ ಸಂಘಟನೆಗಳ ನಾಯಕರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಇದಲ್ಲದೆ, ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದಲ್ಲಿ ಭಾರಿ ಹೋರಾಟ ನಡೆಸುವ ಸಿದ್ಧತೆ ನಡೆಯುತ್ತಿದೆ.
ಜೂನ್ 2ರಂದು ಕರ್ನಾಟಕದಾದ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆದರೆ ಶಾಲಾ-ಕಾಲೇಜುಗಳನ್ನು ಮುಚ್ಚುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ. ನಟ ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಜೂನ್ 2ರಂದು ಕರ್ನಾಟಕ ಬಂದ್‌ಗೆ ಕರೆ ನೀಡುವ ಸಾಧ್ಯತೆ ಇದೆ. ಆದರೆ ಬಂದ್ ಅಥವಾ ಪ್ರತಿಭಟನೆ ಇದುವರೆಗೂ ಚರ್ಚೆಗಳು ನಡೆಯುತ್ತಿದೆ, ಆದರೆ ಅದಕ್ಕೆ ಅಧಿಕೃತ ಘೋಷಣೆಯಾಗಿಲ್ಲ..ನಾಳೆ ಸಂಜೆ ಒಳಗಡೆ ಕರ್ನಾಟಕ ಬಂದ್ ಬಗ್ಗೆ ತೀರ್ಮಾನ ನಡೆಯುವ ಸಾಧ್ಯತೆ ಇದೆ.
ಇದನ್ನೂ ಓದಿ